ಸತೀಶ್ ಜಾರಕಿಹೊಳಿ
ಹುಕ್ಕೇರಿ: ‘ಬಿಡಿಸಿಸಿ ಬ್ಯಾಂಕ್, ಹುಕ್ಕೇರಿಯ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಮತ್ತು ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ನಡೆಯುವ ಚುನಾವಣೆಗಳಲ್ಲಿ ನಾನು ನಟನಷ್ಟೇ. ನಿರ್ಮಾಪಕ ಮತ್ತು ನಿರ್ದೇಶಕ ಬೇರೆ ಬೇರೆ ಇದ್ದಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಸಮೀಪಿಸುತ್ತಿದ್ದು, ಸದಸ್ಯರ ಸಭೆ ಮಾಡುತ್ತಿದ್ದೇವೆ. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನಿರ್ಮಾಪಕ, ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ದೇಶಕರಾಗಿದ್ದಾರೆ. ಅವರಿಬ್ಬರೂ ಚುನಾವಣೆ ಅಖಾಡಕ್ಕೆ ಇನ್ನೂ ಧುಮುಕಿಲ್ಲ. ಅವರು ಕತೆ ಹೇಳಿದ ನಂತರವೇ ಚಿತ್ರ ನಿರ್ಮಾಣ ಆರಂಭವಾಗಲಿದೆ’ ಎಂದು ಮುಗುಳ್ನಕ್ಕರು.
‘ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಕೈ ಹಾಕಿ, ಕತ್ತಿ ಕುಟುಂಬದ ನೇತೃತ್ವದಲ್ಲಿದ್ದ ಆಡಳಿತ ಕಸಿದು ಕೊಟ್ಟವರು ಅವರಿಬ್ಬರು. ಅವರ ಸಲಹೆ ಮೇರೆಗೆ ನಾವು ಹೆಜ್ಜೆ ಇರಿಸಲಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.