ಸತ್ತಿಗೇರಿ: ಸಮೀಪದ ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬವೇರಿದ್ದ ಲೈನ್‌ಮ್ಯಾನ್ ಮಂಗಳವಾರ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಗಳಿಹಾಳದ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಗೋಕಾಕ ತಾಲ್ಲೂಕಿನ ಬಗರನಾಳ ಗ್ರಾಮದ ಮಾರುತಿ ಅವಲಿ(25) ಮೃತರು.
ವಿದ್ಯುತ್ ಕಂಬದಲ್ಲಿ ಮಾರುತಿ ಅವರ ಮೃತದೇಹ ಮೂರು ತಾಸು ಜೋತಾಡಿದರೂ, ಬಾರದ ಹೆಸ್ಕಾಂ ಅಧಿಕಾರಿಗಳ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.