ADVERTISEMENT

ಸವದತ್ತಿ ಯಲ್ಲಮ್ಮ ದೇವಸ್ಥಾನ: ಜೂನ್ 15 ರವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ

​ಪ್ರಜಾವಾಣಿ ವಾರ್ತೆ
Published 30 ಮೇ 2020, 13:17 IST
Last Updated 30 ಮೇ 2020, 13:17 IST

ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂಜೆ ನಡೆಸಲಾಗುತ್ತಿದೆ ಎಂದು ಕೋಟಾರಗಸ್ತಿ ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.