
ಅಥಣಿ: ‘ಸವದಿ ಗ್ರಾಮದ ಬಸವ ಕೇಂದ್ರದ ಕಣಕಣದಲ್ಲೂ ಬಸವ ತತ್ವ ಪಸರಿಸಿದೆ. ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಸವ ತತ್ವಗಳನ್ನು ಅನುಸರಿಸುತ್ತಿರುವುದು ಎಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ’ ಎಂದು ಹಿರಿಯ ಮುಖಂಡ ಗಜಾನನ ಮಂಗಸೂಳಿ ಹೇಳಿದರು.
ಸಮೀಪದ ಸವದಿ ಗ್ರಾಮದಲ್ಲಿ ಶನಿವಾರ ಜರುಗಿದ ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಲಿಂ.ಮಹಾಂತ ಶಿವಯೋಗಿಗಳವರನ್ನು ಪಡೆದ ಸವದಿ ಗ್ರಾಮದ ಭಕ್ತರು ಭಾಗ್ಯವಂತರು. ಸವದಿಯಲ್ಲಿ ಜರಗುವ ಶರಣ ತತ್ವದ ಕಾರ್ಯಕ್ರಮಗಳು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತಿವೆ ಎಂದು ಹೇಳಿದರು.
ಆಧ್ಯಾತ್ಮಿಕ ಚಿಂತಕ ಶಶಿಕಾಂತ ಗುರೂಜಿ ಮಾತನಾಡಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸವದಿ - ಇಲಕಲ್ ಮಠದ ಗುರು ಮಹಾಂತ ಸ್ವಾಮೀಜಿ ಮಾತನಾಡಿದರು.
ಶಿರೂರದ ಡಾ.ಬಸವಲಿಂಗ ಸ್ವಾಮೀಜಿ, ಸಿದ್ದಯ್ಯನಕೋಟೆಯ ಬಸವಲಿಂಗ ಸ್ವಾಮೀಜಿ, ಗುರುಬಸವ ಸ್ವಾಮೀಜಿ, ಶರಣ ಸಾಹಿತಿ ಸಿದ್ದಣ್ಣ ಲಂಗೋಟಿ, ಸಂಖದ ಶಿವಲಿಂಗೇಶ್ವರ ಸ್ವಾಮೀಜಿ, ಜಮಖಂಡಿಯ ಆನಂದ ದೇವರು, ಸಾಹಿತಿ ದೇವೇಂದ್ರ ಬಿಸ್ವಾಗರ, ಧಾರವಾಡದ ಡಾ.ಶಕ್ತಿ ಪಾಟೀಲ, ಅಪ್ಪುಗೌಡ ಪಾಟೀಲ ಸೇರಿದಂತೆ ಅನೇಕರು ಇದ್ದರು. ನೂರು ಜನ ರೈತ ದಂಪತಿಗಳನ್ನು ಶ್ರೀಮಠದಿಂದ ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.