ನಿಪ್ಪಾಣಿ: ತಾಲ್ಲೂಕಿನ ಶ್ರೀಪೇವಾಡಿ ಗ್ರಾಮದ ಶ್ರೀ ಜಿ.ಎಂ. ಸಂಕಪಾಳ ಪ್ರೌಢಶಾಲಾ ಕಟ್ಟಡದಲ್ಲಿ ಶನಿವಾರ ಮಧ್ಯಾಹ್ನ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ಆಸ್ತಿ ಹಾನಿಯಾಗಿದೆ.
ಕಂಪ್ಯೂಟರ್ ಕೊಠಡಿಯಲ್ಲಿದ್ದ 30 ಕಂಪ್ಯೂಟರ್‌ಗಳು, ಕಂಪ್ಯೂಟರ್ ಪರಿಕರಗಳು, ಬ್ಯಾಟರಿಗಳು ಮತ್ತು ಪೀಠೋಪಕರಣಗಳು ಸುಟ್ಟುಹೋಗಿವೆ. ಕಂಪ್ಯೂಟರ್ ಕೊಠಡಿಯ ಪಕ್ಕದಲ್ಲಿರುವ ಪ್ರಾಂಶುಪಾಲರ ಮತ್ತು ಆಡಳಿತ ಕಚೇರಿಯೂ ಬೆಂಕಿಗೆ ಆಹುತಿಯಾಯಿತು. ಪೀಠೋಪಕರಣಗಳು ಮತ್ತು ಕೆಲವು ದಾಖಲೆಗಳು ಸಹ ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯ ಅಗ್ನಿಶಾಮಕ ಇಲಾಖೆ ಮತ್ತು ಶ್ರೀ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ಇಲಾಖೆ ಬೆಂಕಿಯನ್ನು ನಂದಿಸಲು ಸುಮಾರು ಎರಡು ಗಂಟೆಗಳ ಕಾಲ ಶ್ರಮಿಸಿತು. ಸ್ಥಳದಲ್ಲಿದ್ದ ಹಳೆಯ ವಿದ್ಯಾರ್ಥಿಗಳು ಬೆಂಕಿ ನಂದಿಸಲು ಸಹಕರಿಸಿದರು. ರಜೆಯ ದಿನವಾದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಶಾಲೆ ಕೊಠಡಿಯಿಂದ ಹೊಗೆ ಬರುವುದನ್ನು ಗಮನಿಸಿದ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.