ADVERTISEMENT

ನಿಪ್ಪಾಣಿ: ಶಾಲಾ ಪ್ರಾರಂಭೋತ್ಸವ

​ಪ್ರಜಾವಾಣಿ ವಾರ್ತೆ
Published 17 ಮೇ 2022, 3:58 IST
Last Updated 17 ಮೇ 2022, 3:58 IST
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ನಿಪ್ಪಾಣಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳನ್ನು ಶೃಂಗರಿಸಿದ ಆಟೊದಲ್ಲಿ ತರಲಾಯಿತು. ತಹಶೀಲ್ದಾರ್ ಡಾ. ಮೋಹನ ಭಸ್ಮೆ, ಬಿಇಓ ರೇವತಿ ಮಠದ, ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸುರ, ಮೊದಲಾದವರು ಇದ್ದಾರೆ
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ನಿಪ್ಪಾಣಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳನ್ನು ಶೃಂಗರಿಸಿದ ಆಟೊದಲ್ಲಿ ತರಲಾಯಿತು. ತಹಶೀಲ್ದಾರ್ ಡಾ. ಮೋಹನ ಭಸ್ಮೆ, ಬಿಇಓ ರೇವತಿ ಮಠದ, ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸುರ, ಮೊದಲಾದವರು ಇದ್ದಾರೆ   

ನಿಪ್ಪಾಣಿ: ಶಾಲಾ ಪ್ರಾರಂಭೋತ್ಸವ ಮತ್ತು ಕಲಿಕಾ ಚೇತರಿಕೆ ವರ್ಷ ಕಾರ್ಯಕ್ರಮವನ್ನು ತಾಲ್ಲೂಕಿನಾದ್ಯಂತ ಆಚರಿಸಲಾಯಿತು. ಕೆಲ ಶಾಲೆಗಳಲ್ಲಿ ಗುಲಾಬಿ ಹೂ ನೀಡಿ, ಕೆಲ ಶಾಲೆಗಳಲ್ಲಿ ಆರತಿ ಬೆಳಗಿ ಮಕ್ಕಳನ್ನು ಸ್ವಾಗತಿಸಲಾಯಿತು.

ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಅಲಂಕೃತ ಆಟೊ ರಿಕ್ಷಾ ಮೂಲಕ ಮಕ್ಕಳನ್ನು ಶಾಲೆಗೆ ಕರೆತರಲಾಯಿತು. ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಿ ಒಂದನೇಯ ತರಗತಿಗೆ ದಾಖಲಾದ ಮಕ್ಕಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತಿಸಿ ಪಠ್ಯಪುಸ್ತಕಗಳನ್ನು ವಿತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಅಕ್ಷರ ದಾಸೋಹ ಯೋಜನೆಯ ಫಲಾನುಭವಿಗಳಿಗೆ ಊಟ ವಿತರಿಸಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.

ತಹಶಿಲ್ದಾರ್ ಡಾ. ಮೋಹನ ಭಸ್ಮೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ. ಖ., ಸ್ಥಳೀಯ ಶಹರ್ ಪೊಲೀಸ್ ಠಾಣೆಯ ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸುರ, ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ವಿಷಯ ಪರಿವೀಕ್ಷಕ ವಿ.ಎಸ್. ಕಾಂಬಳೆ, ಎಚ್.ಎಸ್. ಖಾಡೆ, ಶಿಕ್ಷಣ ಸಂಯೋಜಕರು, ಸಿ.ಆರ್.ಪಿ, ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಪಾಲಕರು ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.