ADVERTISEMENT

ಕೋವಿಡ್: ಬೆಳಗಾವಿ ಗಡಿ ಚೆಕ್‌‍ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 12:36 IST
Last Updated 14 ಜುಲೈ 2021, 12:36 IST
ಬೆಳಗಾವಿ ತಾಲ್ಲೂಕಿನ ಶಿನೋಳಿ ಚೆಕ್‌ಪೋಸ್ಟ್‌ನಲ್ಲಿ ಡಿಸಿಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ಪೊಲೀಸರು ಮಹಾರಾಷ್ಟ್ರದಿಂದ ಬರುವವರಿಂದ ಕೋವಿಡ್ ನೆಗೆಟಿವ್ ವರದಿ ತಪಾಸಣೆ ನಡೆಸಿದರು
ಬೆಳಗಾವಿ ತಾಲ್ಲೂಕಿನ ಶಿನೋಳಿ ಚೆಕ್‌ಪೋಸ್ಟ್‌ನಲ್ಲಿ ಡಿಸಿಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ಪೊಲೀಸರು ಮಹಾರಾಷ್ಟ್ರದಿಂದ ಬರುವವರಿಂದ ಕೋವಿಡ್ ನೆಗೆಟಿವ್ ವರದಿ ತಪಾಸಣೆ ನಡೆಸಿದರು   

ಬೆಳಗಾವಿ: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಹಾಗೂ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ಗಡಿಗಳ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನುತೀವ್ರವಾಗಿ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

‘ಬಾಚಿ/ಶಿನೋಳ್ಳಿ, ರಕ್ಕಸಕೊಪ್ಪ, ಬೆಕ್ಕಿನಕೆರೆ, ಚೆಲುವ್ಯಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್ ನೆಗೆಟಿವ್ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ಈ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದೆ. ನೆರೆಯ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಸರ್ಕಾರದ ನಿರ್ದೇಶನಂತೆ ಮುಂಜಾಗ್ರತಾ ಕ್ರಮ ವಹಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನನಿಲ್ದಾಣ, ಕಾಕತಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲ ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಕೋವಿಡ್ ನೆಗೆಟಿವ್ ವರದಿ (ಆರ್‌ಟಿಪಿಸಿಆರ್‌) ಇರಬೇಕು ಅಥವಾ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇರಬೇಕು. ಇಲ್ಲವಾದಲ್ಲಿ ಅಂಥವರಿಗೆ ಪ್ರವೇಶ ಕೊಡುತ್ತಿಲ್ಲ’ ಎಂದಮು ತಿಳಿಸಿದ್ದಾರೆ.

ADVERTISEMENT

‘ಆರೋಗ್ಯ ಇಲಾಖೆಯ ಸಿಬ್ಬಂದಿಯು ಥರ್ಮಲ್‌ ಸ್ಕ್ರೀನಿಂಗ್‌ ನಡೆಸುತ್ತಿದ್ದಾರೆ. ಪರೀಕ್ಷಯನ್ನೂ (ಆರ್‌ಎಟಿ) ನಡೆಸಲಾಗುತ್ತಿದೆ. ಬಸ್‌ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.