ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರದಿಂದ ಆರಂಭಗೊಂಡ ಪಿಯು ದ್ವಿತೀಯ ವರ್ಷದ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 42 ಕೇಂದ್ರಗಳಲ್ಲಿ ನಡೆದ ಕನ್ನಡ ವಿಷಯದ ಪರೀಕ್ಷೆಗೆ 14,285 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 13,858 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 427 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 53 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಕನ್ನಡ ವಿಷಯದ ಪರೀಕ್ಷೆಗೆ 24,068 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 23,271 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 797 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಅರೇಬಿಕ್ ವಿಷಯದ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 31 ವಿದ್ಯಾರ್ಥಿಗಳ 30 ಮಂದಿ ಪರೀಕ್ಷೆಗೆ ಹಾಜರಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.