ADVERTISEMENT

ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 6:05 IST
Last Updated 18 ಡಿಸೆಂಬರ್ 2021, 6:05 IST
ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.   

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಮೊದಲಾದ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಳಗಾವಿ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಅನ್ವಯವಾಗಲಿದೆ. ಇಂದು ಬೆಳಿಗ್ಗೆ 8ರಿಂದ ನಾಳೆ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಗುಂಪು‌ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.