ADVERTISEMENT

ಚಿತ್ರಗಳಲ್ಲಿ ನೋಡಿ: ಬೆಳಗಾವಿಯಲ್ಲಿ ವೀರ ಜ್ಯೋತಿಗೆ ಸ್ವಾಗತ, ಕಿತ್ತೂರು ಉತ್ಸವಕ್ಕೆ ಚಾಲನೆ

ಬೆಳಗಾವಿ: ಕಿತ್ತೂರು ವಿಜಯೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಸಂಭ್ರಮದಿಂದ ಬರಮಾಡಿಕೊಂಡು ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಶನಿವಾರ ಅದ್ಧೂರಿ ಚಾಲನೆ ನೀಡಲಾಯಿತು.ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಉಪಸ್ಥಿತರಿದ್ದರು. ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮೊದಲಾದವರು ಇದ್ದರು.ಬಳಿಕ ಜಾನಪದ ಕಲಾವಾಹಿನಿಗೆ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ನವಿಲು ನೃತ್ಯ, ಕೇರಳ ತೆಯಮ್ ನೃತ್ಯ, ಚಂಡೆಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡಗಳ ಕಲಾವಿದರು ಕಲಾವಾಹಿನಿಯಲ್ಲಿ ಪಾಲ್ಗೊಂಡಿದ್ದರು. ಜನಪದ ಗೀತೆಗಳನ್ನು ಹಾಡುತ್ತಾ ಸಾಗಿದ ತಂಡವು ಚನ್ನಮ್ಮನ ಶೌರ್ಯ, ಸಾಹಸದ ಗುಣಗಾನ‌ ಮಾಡಿತು. ಈ ಮೂಲಕ ಕಿತ್ತೂರಿನ ಗತವೈಭವವನ್ನು ಮೆಲುಕು ಹಾಕುವಂತೆ ಮಾಡಿತು.

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 8:15 IST
Last Updated 23 ಅಕ್ಟೋಬರ್ 2021, 8:15 IST
ವೀರ ಜ್ಯೋತಿಗೆ ಸ್ವಾಗತ, ಕಿತ್ತೂರು ಉತ್ಸವಕ್ಕೆ ಚಾಲನೆ
ವೀರ ಜ್ಯೋತಿಗೆ ಸ್ವಾಗತ, ಕಿತ್ತೂರು ಉತ್ಸವಕ್ಕೆ ಚಾಲನೆ   
ನಂದಿ ಧ್ವಜ
ಮನಸೂರೆಗೊಂಡ‌ ಕಲಾವಾಹಿನಿ; ಚನ್ನಮ್ಮನ ಸಾಧನೆ ಮೆಲುಕು
ಕಂಸಾಳೆ
ವೀರ ಜ್ಯೋತಿಗೆ ಸ್ವಾಗತ, ಕಿತ್ತೂರು ಉತ್ಸವಕ್ಕೆ ಚಾಲನೆ
ಜಗ್ಗಲಗಿ ಮೇಳ
ಗಮನ ಸೆಳೆದ ಚಂಡೆ, ನವಿಲು ಕುಣಿತ
ಚಂಡೆಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡಗಳ
ಕಿತ್ತೂರು ಉತ್ಸವ ಅಂಗವಾಗಿ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಚನ್ನಮ್ಮನ ಪ್ರತಿಮೆಗೆ ಶಾಸಕ ಮಹಾಂತೇಶ ದೊಡ್ಡಗೌಡರ ಮಾಲಾರ್ಪಣೆ ಮಾಡಿದರು
ಕಿತ್ತೂರು ಉತ್ಸವ ಅಂಗವಾಗಿ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಚನ್ನಮ್ಮನ ಪ್ರತಿಮೆಗೆ ಶಾಸಕ ಮಹಾಂತೇಶ ದೊಡ್ಡಗೌಡರ ಮಾಲಾರ್ಪಣೆ ಮಾಡಿದರು. ಸಂಸದೆ ಮಂಗಲಾ ಅಂಗಡಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮೊದಲಾದವರು ಇದ್ದಾರೆ
ಚಿತ್ರಗಳಲ್ಲಿ ನೋಡಿ: ವೀರ ಜ್ಯೋತಿಗೆ ಸ್ವಾಗತ, ಕಿತ್ತೂರು ಉತ್ಸವಕ್ಕೆ ಚಾಲನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.