ADVERTISEMENT

ಬೆಳಗಾವಿ: ಮಕ್ಕಳ ಪೋಷಕರಿಗೆ ಪರಿಹಾರಕ್ಕೆ ಪ್ರಸ್ತಾವ- ಡಿಸಿ ಎಂ.ಜಿ. ಹಿರೇಮಠ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 14:58 IST
Last Updated 18 ಜನವರಿ 2022, 14:58 IST

ಬೆಳಗಾವಿ: ‘ರಾಮದುರ್ಗ ತಾಲ್ಲೂಕಿನಲ್ಲಿ ರುಬೆಲ್ಲಾ ಲಸಿಕೆ ಪಡೆದ ನಂತರ ಮೃತಪಟ್ಟ ಮೂವರು ಶಿಶುಗಳು ಪೋಷಕರಿಗೆ ಪರಿಹಾರ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಘಟನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ವರದಿಯೊಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ಪರಿಹಾರ ಕೊಡುವಂತೆಯೂ ಕೋರಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT