ADVERTISEMENT

ಬೆಳಗಾವಿ: ಸ್ಪರ್ಧೆ ಗೆದ್ದ ಹಿರಿಯ ನಾಗರಿಕರಿಗೆ ಬಹುಮಾನ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 15:25 IST
Last Updated 1 ಅಕ್ಟೋಬರ್ 2021, 15:25 IST
ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ನೀಡಲಾಯಿತು. ತೋಂಟದ ಸಿದ್ಧರಾಮ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ ಮೊದಲಾದವರು ಇದ್ದಾರೆ

ಬೆಳಗಾವಿ: ಇಲ್ಲಿನ ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಶುಕ್ರವಾರ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ‍‍ಪಂಚಾಯ್ತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಉದ್ಘಾಟಿಸಿದರು.

ADVERTISEMENT

ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಯಿತು.

ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ರಾಜ್ಯ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಮುಖಂಡ ವಿಕಾಸ ಕಲಘಟಗಿ ಇದ್ದರು.

ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.