ADVERTISEMENT

ಸರ್ವರ್‌ ಸಮಸ್ಯೆ: ರಾತ್ರಿಯವರೆಗೂ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 16:07 IST
Last Updated 7 ಅಕ್ಟೋಬರ್ 2022, 16:07 IST
ಬೆಳಗಾವಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ನಡೆಯಿತು
ಬೆಳಗಾವಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ನಡೆಯಿತು   

ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್‌ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ 8ರವರೆಗೂ ನಡೆಯಿತು.

ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸರ್ವರ್‌ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪೂರ್ಣಗೊಂಡಿರಲಿಲ್ಲ.

ಎರಡನೇ ದಿನದಂದು ಆ ಅಭ್ಯರ್ಥಿಗಳ ಜೊತೆಗೆ, ಮತ್ತೆ 150 ಅಭ್ಯರ್ಥಿಗಳ ದಾಖಲೆ ಪರಿಶೀಲಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.