ಮುನವಳ್ಳಿ: ಯಕ್ಕುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಪ್ರತೀಕವಾಗಿದ್ದ ಗ್ರಾಮದಲ್ಲಿ ಎಲ್ಲರೂ ಒಗ್ಗೂಡಿ ಶಾಂತಿ, ಸೌಹಾರ್ದದಿಂದ ಹಬ್ಬ ಆಚರಿಸಬೇಕು. ಜತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಹಕಾರ ಅಗತ್ಯ ಎಂದು ಸವದತ್ತಿ ಪೋಲಿಸ್ ಠಾಣೆಯ ಪಿಎಸ್ಐ ಕಲ್ಮೇಶ ಬನ್ನೂರ ಹೇಳಿದರು.
ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಬುಧವಾರ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.
ಹಿಂದೂ-ಮುಸ್ಲಿಂ ಬಾಂಧವರು ಜಾತಿಭೇದ ಮರೆತು ಅಣ್ಣ ತಮ್ಮಂದಿರ ಹಾಗೆ ಬದುಕುತ್ತಾ ಇರುವುದು ಭಾವೈಕ್ಯತೆಗೆ ಪ್ರತೀಕವಾಗಿದೆ ಎಂದರು.
ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ, ಕಾರ್ಲಕಟ್ಟಿ ತಾಂಡೆ ಗ್ರಾಮಗಳ ಗ್ರಾಮ ಪಂಚಾಯಿತಿ ಸದಸ್ಯರು, ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪೋಲಿಸ್ ಇಲಾಖೆಯ ಆರ್.ಪಿ.ಕೋಟಗಿ ಸ್ವಾಗತಿಸಿದರು. ಎ.ಟಿ.ರಾಠೋಡ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.