ಮೂಡಲಗಿ: ರಾಜ್ಯದಲ್ಲಿರುವ ಕುರಿಗಾಹಿಗಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಾಗಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಲು ಇದೇ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಕುರಿಗಾಹಿಗಳ ಬೃಹತ್ ಪ್ರತಿಭಟನೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಕಲ್ಲೋಳಿಯ ಮಾರುತಿ ಮರ್ಡಿ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಕುರಿಗಾಹಿಗಳ ಮೇಲೆ ನಿರಂತವಾಗಿ ದೌರ್ಜನ್ಯಗಳು, ಹಲ್ಲೆ, ಜೀವ ಬೆದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳ್ಳತನ ನಡೆಯುತ್ತಿದೆ. ಅರಣ್ಯಾಧಿಕಾರಿಗಳ ಲಂಚದ ಬೇಡಿಕೆಯೂ ಅಧಿಕ ಪ್ರಮಾಣದಲ್ಲಿ ಇದೆ. ಆದ್ದರಿಂದ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ರೂಪಿಸಿ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರ್ಡಿ ಮೌರ್ಯ ಆಗ್ರಹಿಸಿದ್ದಾರೆ.
ಆ. 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಕುರಿಗಾಹಿಗಳು, ಶೋಷಿತ ಸಮುದಾಯಗಳ ಮುಖಂಡರು, ರೈತರು, ಚಿಂತಕರು ಭಾಗವಹಿಸಬೇಕು ಎಂದು ಮೌರ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.