ಬೆಳಗಾವಿ: ‘ಬೆಳಗಾವಿ–ಬೆಂಗಳೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದರಿಂದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹರ್ಷ ವ್ಯಕ್ತಪಡಿಸಿದ್ದಾರೆ.
‘ಬೆಂಗಳೂರು-ಧಾರವಾಡ ಮಾರ್ಗದಲ್ಲಿ ಈಗ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸೇವೆಯನ್ನು ವಿಸ್ತರಿಸುವ ಕುರಿತಾಗಿ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೊಂದಿಗೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉಪಸ್ಥಿತಿಯಲ್ಲಿ ಹಲವು ಬಾರಿ ಸಭೆ ನಡೆಸಲಾಗಿತ್ತು. ಈಗ ಆ ಸೇವೆ ವಿಸ್ತರಣೆ ಬದಲಿಗೆ, ಹೊಸ ವಂದೇ ಭಾರತ್ ಸೇವೆಗೆ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.
‘ಬೆಳಗಾವಿ–ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಸೇವೆ ಆರಂಭಿಸಬೇಕೆಂಬ ಜನರ ಬೇಡಿಕೆ ಬಹುದಿನಗಳಿಂದ ಇತ್ತು. ಈಗ ಅದನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ, ಅಶ್ವಿನಿ ವೈಷ್ಣವ್, ಪ್ರಲ್ಹಾದ ಜೋಶಿ ಹಾಗೂ ವಿ.ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ತ್ವರಿತವಾಗಿ ಈ ಸೇವೆ ಆರಂಭಿಸುವ ಬಗ್ಗೆ ದಿನಾಂಕ ನಿಗದಿಪಡಿಸಿ, ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.