
ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗೆ ಶಿವಸೇನೆಯವರು 'ಜೈ ಮಹಾರಾಷ್ಟ್ರ' ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿಯಲ್ಲಿ ಎಂಇಎಸ್ ನವರು ಮಹಾಮೇಳಾವ್ ನಡೆಸಲು ಮುಂದಾಗಿದ್ದರು. ಇದಕ್ಕೆ ಜಿಲ್ಲಾಡಳಿತ ಅನುಮತಿ ಕೊಡದ ಕಾರಣ, ಕೊಲ್ಹಾಪುರದಲ್ಲಿ ಶಿವಸೇನೆಯವರು ಪುಂಡಾಟಿಕೆ ಮೆರೆದಿದ್ದರು. ಈಗ ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಿಸಲು ಯತ್ನಿಸುತ್ತಿರುವ ಹಿನ್ಮೆಲೆಯಲ್ಲಿ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಬಳಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ತಡೆಯುವಂತೆ ಪೊಲೀಸರು ಸೂಚಿಸಿದ ಕಾರಣ, ಸಾರಿಗೆ ಸಂಸ್ಥೆ ಅಧಿಕಾರಿಗಳು ಈ ಕ್ರಮ ವಹಿಸಿದ್ದಾರೆ.
'ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಬಸ್ ಗಳು ನಿಪ್ಪಾಣಿಯವರೆಗೆ ಹೋಗಿ ವಾಪಸಾಗುತ್ತಿವೆ' ಎಂದು ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.