
ಬೆಳಗಾವಿ: ಇಲ್ಲಿನ ಶಿವಾಜಿ ಉದ್ಯಾನದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಸಂಭ್ರಮದಿಂದ ಶಿವಾಜಿ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌವ ಸಲ್ಲಿಸಿದರು.
‘ಶಾಂತಿ ಮತ್ತು ಸಾಮರಸ್ಯದಿಂದ ಬೆಳಗಾವಿಯಲ್ಲಿ ಈ ವರ್ಷ ಅದ್ದೂರಿಯಾಗಿ ಶಿವಾಜಿ ಜಯಂತಿ ಆಚರಿಸುತ್ತಿದ್ದೇವೆ’ ಎಂದು ಮೊಹಮ್ಮದ್ ರೋಷನ್ ಹೇಳಿದರು.
ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉದ್ಯಾನಕ್ಕೆ ಭೇಟಿ, ಶಿವಾಜಿ ಮಹಾರಾಜರಿಗೆ ಗೌರವ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.