ADVERTISEMENT

ಅಪಮಾನ ಮಾಡಿದ್ದರಿಂದ ರಾಜೀನಾಮೆ ಕೊಟ್ಟೆ: ಶ್ರೀಮಂತ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 15:30 IST
Last Updated 25 ನವೆಂಬರ್ 2019, 15:30 IST
ಕಾಗವಾಡ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮಾತನಾಡಿದರು
ಕಾಗವಾಡ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮಾತನಾಡಿದರು   

ಅಥಣಿ: ‘ಶಾಸಕನನ್ನು ಅಪಮಾನಿಸಿದರೆ ಕ್ಷೇತ್ರದ ಮತದಾರರಿಗೆ ಅಪಮಾನ ಮಾಡಿದಂತೆಯೇ. ಶಾಸಕನಿದ್ದಾಗ ಅನುದಾನ ಕೇಳಲು ಹೋದ ನನಗೆ ಆಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಪಮಾನ ಮಾಡಿದ್ದಾರೆ. ಹೀಗಾಗಿ, ರಾಜೀನಾಮೆ ನೀಡ ಹೊರಬರಬೇಕಾಯಿತು’ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಹೇಳಿದರು.

ಕಾಗವಾಡ ತಾಲ್ಲೂಕು ಅನಂತಪುರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸೋಮವಾರ ಪ್ರಚಾರದ ವೇಳೆ ಅವರು ಮಾತನಾಡಿದರು.

‘ಕ್ಷೇತ್ರಕ್ಕೆ ಅನುದಾನ ಬೇಕೆಂದು ಹಲವು ಬಾರಿ ಮುಖ್ಯಮಂತ್ರಿ ಮನೆ ಬಾಗಿಲಿಗೆ ಹೋಗಿದ್ದೆ. ಆದರೆ, ಸ್ಪಂದಿಸಲಿಲ್ಲ. ನಾನು ಅಬಿವೃದ್ಧಿಗಾಗಿ ರಾಜೀನಾಮೆ ಕೊಟ್ಟಿದ್ದೇನೆಯೇ ಹೊರತು ವೈಯಕ್ತಿಕ ದೃಷ್ಟಿಯಿಂದಲ್ಲ. ಜನರಿಗೆ ಒಳ್ಳೆಯದು ಮಾಡಲೆಂದೇ ರಾಜಕಾರಣಕ್ಕೆ ಬಂದ್ದಿದ್ದೇನೆ. ಆದರೆ, ಸಮ್ಮಿಶ್ರ ಸರ್ಕಾರದಿಂದ ಮೋಸವಾಗಿದೆ’ ಎಂದು ದೂರಿದರು.

ADVERTISEMENT

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ‘ಕುಮಾರಸ್ವಾಮಿಯ 4 ಜಿಲ್ಲೆಗೆ ಮಾತ್ರವೇ ಮುಖ್ಯಮಂತ್ರಿಯಾಗಿದ್ದರು. ಉತ್ತರ ಕರ್ನಾಟಕದವರು ಮತ ಕೊಟ್ಟಿಲ್ಲ, ನಾನೇಕೆ ಅನುದಾನ ಕೊಡಲಿ ಎಂದು ಕೇಳುತ್ತಿದ್ದರು’ ಎಂದು ಟೀಕಿಸಿದರು.

ಸಚಿವ ಸಿ.ಸಿ. ಪಾಟೀಲ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ವಕೀಲ ನಿಂಗಪ್ಪ ಖೋಕಲೆ, ಅಪ್ಪಾಸಾಬ ಅವತಾಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.