
ಬೆಳಗಾವಿ: ಗಡಿಯಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಂಡು, ಕನ್ನಡಿಗರು ಮತ್ತು ಮರಾಠಿಗರ ಮಧ್ಯೆ ವಿಷಬೀಜ ಬಿತ್ತುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡ ಶುಭಂ ಶೆಳಕೆ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕಿತ್ತೂರು ಕರ್ನಾಟಕ ಸೇನೆಯವರು ಶನಿವಾರ ಪ್ರತಿಭಟನೆ ನಡೆಸಿದರು.
ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆರ್‌ಪಿಡಿ ವೃತ್ತದಲ್ಲಿ ವೀರ ಮದಕರಿ ನಾಯಕನ ಪುತ್ಥಳಿ ಸ್ಥಾಪಿಸಿ, ಆ ವೃತ್ತಕ್ಕೆ ಮದಕರಿ ನಾಯಕರ ಹೆಸರು ನಾಮಕರಣ ಮಾಡಬೇಕು. ಗಡಿ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡ ಮಹೇಶ ಶೀಗಿಹಳ್ಳಿ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.