ADVERTISEMENT

ಕುಮಾರಸ್ವಾಮಿ ಹೆಸರೆತ್ತುತ್ತಿದ್ದಂತೆಯೇ ಸಿದ್ದರಾಮಯ್ಯ ಸಿಡಿಮಿಡಿ

​ಪ್ರಜಾವಾಣಿ ವಾರ್ತೆ
Published 7 ಮೇ 2022, 6:29 IST
Last Updated 7 ಮೇ 2022, 6:29 IST
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಳಗಾವಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ‌ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಎತ್ತುತ್ತಿದ್ದಂತೆಯೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಿಡಿಮಿಡಿಗೊಂಡರು. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಉತ್ತರಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, 'ಸುಳ್ಳುಗಳನ್ನು ಹೇಳುತ್ತಾ ಇರುವವರ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಕ್ಕೆ ಬಯಸುವುದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.