
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಚನ್ನಮ್ಮನ ಕಿತ್ತೂರು (ಬೆಳಗಾವಿ): ‘ನಾನು ಈಗ ಅಹಿಂದ ಸಂಘಟಿಸುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡ್ತಾರೆ ಎಂದಷ್ಟೇ ಯತೀಂದ್ರ ಹೇಳಿದ್ದಾರೆ. ನಾಯಕತ್ವವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ, ನಾವಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಯತೀಂದ್ರ ಹೇಳಿಕೆಯನ್ನು ಮಾಧ್ಯಮದವರೇ ತಿರುಚಿದ್ದೀರಿ. ಅವರು ಸೈದ್ಧಾಂತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ’ ಎಂದರು.
‘ಎರಡೂವರೆ ವರ್ಷದ ಸಂಪುಟ ಪುನರ್ ರಚನೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಹೈಕಮಾಂಡ್ 4–5 ತಿಂಗಳ ಹಿಂದೆಯೇ ಅನುಮತಿ ನೀಡಿದೆ. ಮಾಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.