ಗೋಕಾಕ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಚುನಾವಣಾ ಪ್ರಚಾರ ಸಭೆ ಏ.30ರಂದು ಮಧ್ಯಾಹ್ನ 2ಕ್ಕೆ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜರುಗಲಿದೆ.
ಈ ಕುರಿತು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿದ್ಲಿಂಗಪ್ಪ ದಳವಾಯಿ, ‘ಅಂದು ಬೆಳಗಾವಿ ಲೋಕಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಪ್ರಚಾರಾರ್ಥ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ’ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಚಂದ್ರಶೇಖರ ಕೊಣ್ಣೂರ, ಡಾ. ಮಹಾಂತೇಶ ಕಡಾಡಿ, ಅಫ್ಜಲ್ ಖತೀಬ್, ಮಾಯಪ್ಪ ತಹಶೀಲ್ದಾರ, ಸಂಜಯ ಪೂಜಾರಿ, ಪ್ರಕಾಶ ಡಾಂಗೆ, ಜಾಕೀರ್ ನದಾಫ, ಎಂ.ಕೆ.ಪೂಜಾರಿ, ಬಿ.ಕೆ.ಜಗ್ನನಾಥ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.