ADVERTISEMENT

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 12:01 IST
Last Updated 9 ಸೆಪ್ಟೆಂಬರ್ 2020, 12:01 IST
ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಎಬಿವಿಪಿ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು
ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಎಬಿವಿಪಿ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು   

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು.

ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.

ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯ ಘಟಕದ ಉಪಾಧ್ಯಕ್ಷ ಆನಂದ ಹೊಸೂರ, ರೋಹಿತ ಉಮನಾಬಾದಿಮಠ, ಕಿರಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.