ADVERTISEMENT

ಮಹತ್ವದ ಇಲಾಖೆಗಳ ಕಚೇರಿಗಳು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ: ಬಸವರಾಜ‌ ಬೊಮ್ಮಾಯಿ

ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 12:28 IST
Last Updated 21 ಆಗಸ್ಟ್ 2021, 12:28 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಳಗಾವಿ: ಮಹತ್ವದ ಇಲಾಖೆಗಳ ಕಚೇರಿಗಳನ್ನು ಇಲ್ಲಿನ ಸುವರ್ಣ ‌ವಿಧಾನಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಇಲ್ಲಿನ‌ ಸುವರ್ಣ ‌ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಶನಿವಾರ ಅವರು ಮಾತನಾಡಿದರು.

ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರ ಮಾಡಲಾಗುವುದು. ವಿಧಾನಸೌಧದಂತೆ ಸುವರ್ಣ ವಿಧಾನಸೌಧದಲ್ಲೂ ಜನರ ಪರವಾಗಿ ಚಟುವಟಿಕೆಗಳು ನಡೆಯುವಂತೆ‌ ನೋಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಭರವಸೆ‌ ನೀಡಿದರು.

ADVERTISEMENT

ಸಕ್ಕರೆ ಆಯುಕ್ತರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಈಗಾಗಲೇ ಆದೇಶವಾಗಿದ್ದರೂ ಕೆಲವು ಕಚೇರಿಗಳು ಇಲ್ಲಿಗೆ ಸ್ಥಳಾಂತರವಾಗಿಲ್ಲ. ಅವುಗಳ ಸ್ಥಳಾಂತರಕ್ಕೆ ಮರು ಆದೇಶ ಮಾಡಲಾಗುವುದು ಎಂದು ತಿಳಿಸಿದರು.

ಬಿಮ್ಸ್ (ಜಿಲ್ಲಾಸ್ಪತ್ರೆ) ಸಮಗ್ರ ಸುಧಾರಣೆಗೆ ಕ್ರಮ ವಹಿಸಲಾಗುವುದು. ಇದಕ್ಕಾಗಿ ತಂಡವನ್ನು ಕಳುಹಿಸಿ ವರದಿ ಪಡೆಯಲಾಗುವುದು ಎಂದರು.

ಸಚಿವರಾದ ಉಮೇಶ ಕತ್ತಿ, ಗೋವಿಂದ ಕಾರಜೋಳ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಂಸದೆ ಮಂಗಲಾ ಸುರೇಶ ಅಂಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.