ADVERTISEMENT

ಬಸವಂತರಾವಗೆ ಬೆಳ್ಳಿ ಪದಕ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 5:07 IST
Last Updated 4 ಮಾರ್ಚ್ 2026, 5:07 IST
ಬಸವಂತರಾವ ದಾದಾಸಾಹೇಬ ಹುದ್ದಾರ
ಬಸವಂತರಾವ ದಾದಾಸಾಹೇಬ ಹುದ್ದಾರ   

ಬೆಳಗಾವಿ: ಸಾರಿಗೆ ಸಂಸ್ಥೆಯ ಬೈಲಹೊಂಗಲ ಘಟಕದ ಬಸವಂತರಾವ ದಾದಾಸಾಹೇಬ ಹುದ್ದಾರ ಅವರು ಅಪಘಾತ ರಹಿತ ಬಸ್ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಬೆಳ್ಳಿ‌ ಪದಕಕ್ಕೆ ಭಾಜನರಾಗಿದ್ದಾರೆ.

ಬೈಲಹೊಂಗಲ ತಾಲ್ಲೂಕಿನ ಮೂಗಬಸವ ಗ್ರಾಮದ ಬಸವಂತರಾವ ಹುದ್ದಾರ ಕಳೆದ 18 ವರ್ಷಗಳಿಂದ ಸಾರಿಗೆ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚೆಗೆ ಬೆಳಗಾವಿಯಲ್ಲಿ ನಡೆದ ವಾಕರಸಾ 28ನೇ ಸಂಸ್ಥಾಪನಾ ದಿನಾಚರಣೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳ್ಳಿ ಪದಕ ಪ್ರದಾನ ಮಾಡಿ ಅವರಿಗೆ ಗೌರವಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಾಕರಸಾ ಅಧ್ಯಕ್ಷ ರಾಜು ಕಾಗೆ, ಶಾಸಕರಾದ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.