ADVERTISEMENT

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ ಬೆಳ್ಳಿ ವಶ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2019, 3:45 IST
Last Updated 13 ಮಾರ್ಚ್ 2019, 3:45 IST
   

ಬೆಳಗಾವಿ: ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ. ಬೆಳ್ಳಿಯನ್ನು ಪೊಲೀಸರು ಕರ್ನಾಟಕ- ಮಹಾರಾಷ್ಟ್ರದ ಗಡಿ ನಿಪ್ಪಾಣಿ ಸಮೀಪದ ಕೊಗನೋಳಿಯಲ್ಲಿ ಮಂಗಳವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ರಾಜೇಂದ್ರ ಜೈನ್ ಎನ್ನುವವರು ಕೊಲ್ಹಾಪುರದಿಂದ ರಾಣೆಬೆನ್ನೂರಿಗೆ ಹೋಗುತ್ತಿದ್ದರು. ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT