ADVERTISEMENT

‘ಯಶಸ್ಸು ಗಳಿಸಲು ಸರಳ ಶಿಸ್ತು ಸಾಕು’

ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 16:51 IST
Last Updated 13 ಸೆಪ್ಟೆಂಬರ್ 2022, 16:51 IST
ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಪ್ರೊ.ತ್ಯಾಗರಾಜ ಮಾತನಾಡಿದರು
ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಪ್ರೊ.ತ್ಯಾಗರಾಜ ಮಾತನಾಡಿದರು   

ಬೆಳಗಾವಿ: ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿರುತ್ತದೆ. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂಬಿಎ ವಿಭಾಗದ ಅಧ್ಯಕ್ಷ ಪ್ರೊ.ತ್ಯಾಗರಾಜ ಹೇಳಿದರು.

ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ 2021-2022ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕ್ರೀಡಾ– ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಯುವಕರು ನಮ್ಮ ದೇಶದ ಶಕ್ತಿ. ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಅವರ ಮೇಲಿದೆ. ಅವರು ಬುದ್ಧಿವಂತಿಕೆ, ಜ್ಞಾನ ಮತ್ತು ಧೈರ್ಯದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಪದವೀಧರರಿಗೆ ಸಾಕಷ್ಟು ಉತ್ತಮ ಅವಕಾಶಗಳಿವೆ. ಅವರು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಇಂದು ನ್ಯಾಯಾಂಗ ವ್ಯವಸ್ಥೆಯು ಸಾಕಷ್ಟು ವಿಸ್ತರಿಸಿಕೊಂಡಿದೆ. ಯಶಸ್ವಿ ವೃತ್ತಿಪರರಾಗಿ ಹೊರಹೊಮ್ಮಲು ಅಹರ್ನಿಷಿ ಪ್ರಯತ್ನಿಸಬೇಕು. ಎಲ್ಲಕ್ಕೂ ಮುಖ್ಯವಾಗಿ ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಪ್ರಾಮಾಣಿಕತೆ, ನಿಷ್ಠೆ, ಬದ್ಧತೆ, ನಂಬಿಕೆ ಮೇಲೆ ಜೀವನವನ್ನು ರೂಪಿಸಿಕೊಳ್ಳಬೇಕುಎಂದರು.

ADVERTISEMENT

ವಕೀಲರಾದವರು ಭಾಷೆ ಮೇಲೆ ಪ್ರಭುತ್ವ ಸಾಧಿಸಬೇಕು. ಬಡವರು ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜು ಸ್ಥಳೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ರಾಜೇಂದ್ರ ಬಿ. ಬೆಲ್ಲದ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಪ್ರಾಂಶುಪಾಲ ಬಿ.ಜಯಸಿಂಹ ಸ್ವಾಗತಿಸಿದರು. ಕಾಲೇಜಿನ ಪ್ರಧಾನ ಕಾರ್ಯದರ್ಶಿ ಪ್ರೀತಿ ಗಂಗಾಧರ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ವಿವಿಧ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.