ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಚುನಾವಣೆ ಸಿಬ್ಬಂದಿ ವಾಹನ ತಪಾಸಣೆ ಚುರುಕುಗೊಳಿಸಿದ್ದು, ದಾಖಲೆಯಿಲ್ಲದೆ ಸಾಗಿಸುತ್ತಿದ್ದ ₹4 ಲಕ್ಷ ನಗದು ಹಣವನ್ನು ರಾಯಬಾಗ ತಾಲ್ಲೂಕಿನ ನಸ್ಲಾಪುರ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಯರಗಟ್ಟಿ ಚೆಕ್‌ಪೋಸ್ಟ್‌ನಲ್ಲಿ ಬೈಕ್ ಸವಾರರೊಬ್ಬರಿಂದ ₹2 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಸವದತ್ತಿ ತಾಲ್ಲೂಕಿನ ಚಚಡಿಯಲ್ಲಿ ದಾಳಿ ನಡೆಸಿ, ₹75 ಸಾವಿರ ಮೌಲ್ಯದ 103 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.