ADVERTISEMENT

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಭ್ರಷ್ಟಾಚಾರ -ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 12:35 IST
Last Updated 19 ಜುಲೈ 2021, 12:35 IST

ಬೆಳಗಾವಿ: ‘ಇಲ್ಲಿ ಜಾರಿಗೊಳಿಸಲಾಗಿರುವ ಸ್ಮಾರ್ಟ್ ಸಿಟಿ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಬಹು ದೊಡ್ಡ ಭ್ರಷ್ಟಾಚಾರ ನಡೆದಿದೆ’ ಎಂದು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ವಿದ್ಯುತ್‌ ದೀಪ ಬದಲಾವಣೆ ಮಾಡುವುದು ಯೋಜನೆಯ ಸಾಧನೆಯಾಗಿದೆ. ಎರಡು ವರ್ಷದ ಹಿಂದೆ ಅಳವಡಿಸಿದ್ದ ಪೇವರ್ಸ್‌ ತೆಗೆದು ಬೇರೆಯದು ಹಾಕುತ್ತಿದ್ದಾರೆ. ಗುಂಡಿ ಮುಚ್ಚುತ್ತಿಲ್ಲ. ರಸ್ತೆಗಳ ಗುಣಮಟ್ಟವೂ ಸರಿ ಇಲ್ಲ’ ಎಂದು ದೂರಿದರು.

‘ಯೋಜನೆಯಲ್ಲಿ ಎಷ್ಟು ಕೋಟಿ ರೂಪಾಯಿಯ ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಇದರಲ್ಲಿ ಯಾವ್ಯಾವ ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ ಎನ್ನುವುದನ್ನು ಚರ್ಚಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಕಾಮಗಾರಿ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಬಿದ್ದು ಸಾವಿಗೀಡಾದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಆ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಸಾಲದು. ಸಾವು–ನೋವಿಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಬೆಂಗಳೂರು ಅಥವಾ ಮೈಸೂರಿನ ರೀತಿ ನಮ್ಮ ನಗರ ಕಾಣುತ್ತಿಲ್ಲ.ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲ. ಬಿಜೆಪಿ ಶಾಸಕರು ಫಲಕ ಹಾಕುವುದು ಬಿಟ್ಟು ಬೇರೇನೂ ಮಾಡುತ್ತಿಲ್ಲ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.