ADVERTISEMENT

ಬೆಳಗಾವಿ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 1:58 IST
Last Updated 5 ಫೆಬ್ರುವರಿ 2026, 1:58 IST
ಬೆಳಗಾವಿ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದಲ್ಲಿ ಯೋಧ ಜಗದೀಶ ಶಿಂಧೆ ಅವರ ಅಂತ್ಯಕ್ರಿಯೆ ಬುಧವಾರ ನೆರವೇರಿತು
ಬೆಳಗಾವಿ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದಲ್ಲಿ ಯೋಧ ಜಗದೀಶ ಶಿಂಧೆ ಅವರ ಅಂತ್ಯಕ್ರಿಯೆ ಬುಧವಾರ ನೆರವೇರಿತು   

ಬೆಳಗಾವಿ: ಪಂಜಾಬ್‌ನ ಬಟಿಂದಾ ನಗರದಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ಯೋಧ ಜಗದೀಶ ಶಿಂಧೆ ಅವರ ಅಂತ್ಯಕ್ರಿಯೆ ಬುಧವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಬುಧವಾರ ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಯೋಧನ ಪಾರ್ಥಿವ ಶರೀರ ತರಲಾಯಿತು. ಅಲ್ಲಿ ಸೇನಾಧಿಕಾರಿಗಳು ಗೌರವ ಸಲ್ಲಿಸಿದರು.

ನಂತರ ಕಂಗ್ರಾಳಿ ಕೆ.ಎಚ್‌. ಗ್ರಾಮದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮರಾಠಿ ಶಾಲೆ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಕೆಲಕಾಲ ಇರಿಸಲಾಗಿತ್ತು. ಬಳಿಕ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ADVERTISEMENT

ಯೋಧನ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.