ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಯೋಧ ಸೂರಜ್ ಧೋಂಡಿರಾಮ ಸುತಾರ ಅವರ ಅಂತ್ಯಕ್ರಿಯೆ ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿಯಲ್ಲಿ ಬುಧವಾರ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಸಾಂಬ್ರಾ ವಿಮಾನ ನಿಲ್ದಾಣದಿಂದ ಯಡೂರವಾಡಿಗೆ ಪಾರ್ಥಿವ ಶರೀರ ತಲುಪಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ. ಚರಮೂರ್ತಿಮಠದ ಸಂಪಾದನ ಸ್ವಾಮೀಜಿ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಗಣೇಶ ಹುಕ್ಕೇರಿ ಅವರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.