ADVERTISEMENT

ಸ್ಪೀಕರ್ ಕಚೇರಿ ಅವ್ಯವಹಾರ ಆರೋಪ: ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ; ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 10:46 IST
Last Updated 29 ಅಕ್ಟೋಬರ್ 2025, 10:46 IST
ಸಂಜಯ ಪಾಟೀಲ
ಸಂಜಯ ಪಾಟೀಲ   

ಬೆಳಗಾವಿ: ‘ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್‌ ಕಚೇರಿಯಿಂದ ಕೈಗೊಂಡಿರುವ ಕಾಮಗಾರಿಗಳಲ್ಲಿ ಅವ್ಯವಹಾರದ ಆರೋಪ ಕೇಳಿಬರುತ್ತಿದೆ. ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ಬಗ್ಗೆ ತನಿಖೆಯಾಗಬೇಕು’ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಒತ್ತಾಯಿಸಿದರು.

‘ಖಾದರ್‌ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ. ಆದರೆ, ಈಗ ಅವರು ನಿಭಾಯಿಸುತ್ತಿರುವ ಸಂವಿಧಾನಾತ್ಮಕ ಹುದ್ದೆಯನ್ನು(ವಿಧಾನಸಭೆ ಅಧ್ಯಕ್ಷ ಸ್ಥಾನವನ್ನು) ನಾವು ನಿಂದಿಸುವುದಿಲ್ಲ. ಅವರು ತನಿಖೆ ಎದುರಿಸುವ ಮುನ್ನ, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಈ ಸಂಬಂಧ ರಾಜ್ಯಪಾಲರಿಗೂ ಮನವಿ ಸಲ್ಲಿಸಲಿದ್ದೇವೆ’ ಎಂದು ಬುಧವಾರ  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಂಗಳೂರು ಮೂಲದ ಕಂಪನಿಯೇ ಎಲ್ಲ ಕಾಮಗಾರಿಗಳನ್ನು ಕೈಗೊಂಡಿದೆ. ಇದನ್ನು ಗಮನಿಸಿದರೆ ಕಾಂಗ್ರೆಸ್‌ ಪಕ್ಷದಲ್ಲಿರುವ ಬೇರೆ ಸಚಿವರಂತೆ ಖಾದರ್‌ ಅವರೂ ಭ್ರಷ್ಟಾಚಾರ ಮಾಡಿದ ಅನುಮಾನ ಮೂಡುತ್ತಿದೆ’ ಎಂದು ದೂರಿದರು.

ADVERTISEMENT

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.