ADVERTISEMENT

‘ವಿಶೇಷ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 12:41 IST
Last Updated 13 ಡಿಸೆಂಬರ್ 2018, 12:41 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುರುವಾರ ಅಂಗವಿಕಲರ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ಸದಸ್ಯರು ಧರಣಿ ನಡೆಸಿದರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುರುವಾರ ಅಂಗವಿಕಲರ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ಸದಸ್ಯರು ಧರಣಿ ನಡೆಸಿದರು   

ಬೆಳಗಾವಿ: ರಾಜ್ಯದಲ್ಲಿ ವಿಶೇಷ ಶಾಲಾ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಅನುದಾನದ ನೀತಿಸಂಹಿತೆಯಲ್ಲಿ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಅಂಗವಿಕಲರ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದವರು ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಧರಣಿ ನಡೆಸಿದರು.

ರಾಜ್ಯದಲ್ಲಿ 1983ರ ಅನುದಾನದ ನೀತಿಸಂಹಿತೆಯಡಿ 32 ಶಾಲೆಗಳು ಅನುದಾನಕ್ಕೆ ಒಳಪಟ್ಟಿವೆ. ಇಲ್ಲಿ ಕೆಲಸ ಮಾಡುತ್ತಿರುವವರಿಗೆ ಸೇವಾ ಭದ್ರತೆ ಹಾಗೂ ಆರ್ಥಿಕ ಭದ್ರತೆ ಸಿಗುತ್ತಿದೆ. ಆದರೆ, ಶಿಶು ಕೇಂದ್ರೀಕೃತ ಯೋಜನೆಗಳಡಿ 138 ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಸೇವಾ ಭದ್ರತೆ ನೀಡಿಲ್ಲ. 25–30 ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ₹13500 ವೇತನವನ್ನಷ್ಟೇ ಪಡೆಯುತ್ತಿದ್ದಾರೆ. ಇಷ್ಟು ಕಡಿಮೆ ಸಂಬಳದಲ್ಲಿ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಹೊಸದಾಗಿ ನೇಮಕಗೊಂಡಿವರಿಗೂ ಅಷ್ಟೇ ವೇತನ ಕೊಡಲಾಗುತ್ತಿದೆ’ ಎಂದು ತಿಳಿಸಿದರು.

‘ವಿಶೇಷ ಶಾಲೆಗಳನ್ನು ಸಾಮಾನ್ಯ ಶಾಲೆಗಳಂತೆಯೇ ಪರಿಗಣಿಸಿ, ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ದೊರೆಯುವ ಸೌಲಭ್ಯಗಳನ್ನು ನಮಗೂ ಒದಗಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಬೆಳಗಾವಿ ಘಟಕದ ಅಧ್ಯಕ್ಷ ಲಿಂಗರಾಜ ತಳಬಾಳ, ಗೌರವ ಕಾರ್ಯದರ್ಶಿ ಎಸ್.ಎಸ್. ಅಂಗಡಿ, ಮುಖಂಡರಾದ ಬಿ.ಎನ್. ಘಂಟಿ, ಗವಿಸಿದ್ದಯ್ಯ, ಬಾಹುಬಲಿ ಸಂಕನ್ನವರ, ಆನಂದ ಕಾಂಬಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.