ADVERTISEMENT

ಬೆಳಗಾವಿ: ಮಸೀದಿಗಳಲ್ಲಿ ಅನಧಿಕೃತ ಧ್ವನಿವರ್ಧಕಗಳ ತೆರವಿಗೆ ಶ್ರೀರಾಮಸೇನೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 8:40 IST
Last Updated 8 ಜೂನ್ 2022, 8:40 IST
ಶ್ರೀರಾಮಸೇನೆ ಪ್ರತಿಭಟನೆ
ಶ್ರೀರಾಮಸೇನೆ ಪ್ರತಿಭಟನೆ   

ಬೆಳಗಾವಿ: 'ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳ ತೆರವಿಗೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು, ಇಲ್ಲಿನ ಚವಾಟ್ ಗಲ್ಲಿಯಲ್ಲಿ ಶಾಸಕ ಅನಿಲ ಬೆನಕೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಶ್ರೀರಾಮಸೇನೆ ಜಿಲ್ಲಾ ಘಟಕ ಅಧ್ಯಕ್ಷ ರವಿಕುಮಾರ್ ಕೋಕಿತಕರ್ ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, 'ನಿಮ್ಮ ಕ್ಷೇತ್ರದಲ್ಲಿ ಇರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು' ಎಂದು ಒತ್ತಾಯಿಸಿದರು.

ಮೇ 9ರಂದು ನಾವು ಹೋರಾಟ ತೀವ್ರಗೊಳಿಸಿದ್ದೆವು. ಆಗ ಅನಧಿಕೃತ ಮೈಕ್ ತೆರವಿಗೆ ಸರ್ಕಾರ ನೋಟಿಸ್ ಜಾರಿ ಮಾಡಿತ್ತು. ಆದರೆ, ಒಂದು ತಿಂಗಳು ಕಳೆದರೂ ಆದೇಶ ಪಾಲನೆಯಾಗಿಲ್ಲ. ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಷಯ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ವಿನಯ ಅಂಗ್ರೋಳಿ, ವಿನೋದ ಹೊನಗೇಕರ, ಓಂಕಾರ ಗೋಡ್ಸೆ, ಸಾಗರ ಪಾಟೀಲ, ಕಿಶೋರ ಶಹಾಪುರಕರ, ಪಿ.ಕೆ.ಪಾಟೀಲ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.