ADVERTISEMENT

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 8:55 IST
Last Updated 22 ನವೆಂಬರ್ 2022, 8:55 IST
   

ಬೈಲಹೊಂಗಲ: ಪಟ್ಟಣದ ಇಂದಿರಾ ನಗರದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ಮಂಗಳವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಡ್ಡಿವಾಡ ಗ್ರಾಮದ ಪರಶುರಾಮ ಕೋನೇರಿ (20) ಸಾವಿಗೆ ಶರಣಾದವರು. ಇಲ್ಲಿನ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದರು.

ಎಂದಿನಂತೆ ಮಂಗಳವಾರ ಕೂಡ ವಸತಿ ನಿಲಯದ ಇತರ ವಿದ್ಯಾರ್ಥಿಗಳು ತಮ್ಮ ತಮ್ಮ ಕಾಲೇಜಿಗೆ ತೆರಳಿದರು. ಆ ಸಮಯದಲ್ಲಿ ತನ್ನ ಕೊಠಡಿಗೆ ಹೋದ ಪರಶುರಾಮ ಟವಲ್‌ನಿಂದ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಬಹಳ ಹೊತ್ತಿನ ನಂತರ ಬಾಗಿಲು ತೆರೆಯದ ಕಾರಣ ಅನುಮಾನ ಬಂದು ಪೊಲೀಸರಿಗೆ ಕರೆ ಮಾಡಲಾಯಿತು.

ADVERTISEMENT

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ವಿದ್ಯಾರ್ಥಿಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲ್ಲೂಕು ಆಸ್ಪತ್ರೆಗೆ ಸಾಗಿಸಿದರು. ಸಾವಿಗೆ ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.