
ಚಿಕ್ಕೋಡಿ:ವಿದ್ಯುತ್ ತಗುಲಿ ತಾಲ್ಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಕೃಷ್ಣ ಮಂಜುನಾಥ ಹೆಗಡೆ (13) ಗುರುವಾರ ಮೃತ ಪಟ್ಟಿದ್ದಾನೆ.
ವಸತಿ ನಿಲಯದ ಆವರಣದಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಆ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ತಾಲ್ಲೂಕಿನ ನವಲಿಹಾಳ ಗ್ರಾಮದ ನಿವಾಸಿ ಕೃಷ್ಣ ಹೆಗಡೆ ಸಾವಿಗೆ ವಸತಿ ನಿಲಯದ ಪ್ರಾಚಾರ್ಯ ಚಂದ್ರಪ್ಪ ಮುರುಗೋಡ ಬೇಜವಬ್ದಾರಿ ಕಾರಣ ಎಂಬುವುದು ಸ್ಥಳೀಯರ ಆರೋಪವಾಗಿದೆ. ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಸತಿ ನಿಲಯದ ಆವರಣದಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದ್ದರೂ ಅದನ್ನು ತೆರವುಗೊಳಿಸಲು ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ನಿಲಯದ ಪ್ರಾಚಾರ್ಯ ಚಂದ್ರಪ್ಪ ಮುರುಗೋಡ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಪದಾಧಿಕಾರಿಗಳು ಆಗಮಿಸಿ ಮೃತ ಬಾಲಕನ ಪಾಲಕರಿಗೆ ₹ 5 ಲಕ್ಷ ಮೊತ್ತದ ಪರಿಹಾರ ಚೆಕ್ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.