ADVERTISEMENT

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 14:38 IST
Last Updated 24 ಜೂನ್ 2019, 14:38 IST
ಹೊಸಟ್ಟಿ ಗ್ರಾಮದ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಅಥಣಿಯಲ್ಲಿ ಜಿಲ್ಲಾ ಪ‍ಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಎಇಇ ಡಿ.ಬಿ. ಹಿಮ್ಮಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಹೊಸಟ್ಟಿ ಗ್ರಾಮದ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಅಥಣಿಯಲ್ಲಿ ಜಿಲ್ಲಾ ಪ‍ಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಎಇಇ ಡಿ.ಬಿ. ಹಿಮ್ಮಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಆಥಣಿ: ತಾಲ್ಲೂಕಿನ ಹೊಸಟ್ಟಿ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮದ ವಿದ್ಯಾರ್ಥಿಗಳು, ರೈತ ಸಂಘದ ಮುಖಂಡರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ‘ಗ್ರಾಮವನ್ನು ಸಂಪರ್ಕಿಸುವ ರಸ್ತೆ ಬಹಳ ಹಾಳಾಗಿದೆ. ಇದರಿಂದಾಗಿ ನಮಗೆ ಬಹಳ ತೊಂದರೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಗ್ರಾಮದ ಯುವಕ ಶಶಿಧರ ಬರ್ಲಿ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಾದ ಮಹಾದೇವ ಬರ್ಲಿ, ಮಹಾಂತೇಶ ನಾಯಿಕ, ರಾಜು ಬರ್ಲಿ, ಶಂಕರ ಕೋಳಿಗುಡ್ಡ, ಸಚಿನ ಸೌದಾಗರ, ಶ್ರೀಶೈಲ ನಾಯಿಕ, ಸಂತೋಷ ಪವಾರ, ಚಂದ್ರಶೇಖರ ರೋಕಡಿ, ಮಹೇಶ ಘಾಟಗಿ, ಪ್ರಶಾಂತ ಪೋಳ ಭಾಗವಹಿಸಿದ್ದರು.

ADVERTISEMENT

ಹೊಸಟ್ಟಿ ಗ್ರಾಮ ಸೌಲಭ್ಯಗಳಿಲ್ಲದೆ ಬಳಲುತ್ತಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಸೋಮವಾರ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.