ADVERTISEMENT

ಪರೀಕ್ಷಾ ಪೇ ಚರ್ಚಾ: ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳಿಂದಲೂ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 12:41 IST
Last Updated 1 ಏಪ್ರಿಲ್ 2022, 12:41 IST
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಡೆಸಿದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳೂ ವೀಕ್ಷಿಸಿದರು
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಡೆಸಿದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳೂ ವೀಕ್ಷಿಸಿದರು   

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 5ನೇ ಆವೃತ್ತಿಯನ್ನು ಶುಕ್ರವಾರ ನಡೆಸಿದರು. ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರೊಂದಿಗೆ ನೇರವಾಗಿ ಸಂವಾದ ನಡೆಸಿದರು.

ಜಿಲ್ಲಾ ಕೇಂದ್ರದಲ್ಲಿ ಕೆಎಲ್‌ಎಸ್ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಡಿಡಿಪಿಐ ಬಸವರಾಜ ನಲತವಾಡ, ಜಿಲ್ಲಾ ಉಪ ಸಮನ್ವಯಾಧಿಕಾರಿ ಬಿ.ಎಚ್. ಮಿಲ್ಲಾನಟ್ಟಿ, ನಗರ ಬಿಇಒ ವೈ.ಜೆ. ಭಜಂತ್ರಿ, 450 ವಿದ್ಯಾರ್ಥಿಗಳು ಭಾಗವಹಿಸಿದರು.

ಜಿಲ್ಲೆಯಾದ್ಯಂತ 1,557 ಶಾಲೆಗಳ 1,42,380 ವಿದ್ಯಾರ್ಥಿಗಳು ವಿವಿಧ ಮಾಧ್ಯಮಗಳ ಮೂಲಕ ವೀಕ್ಷಿಸಿದರು. ಸಂವಾದದಲ್ಲಿ ನೇರವಾಗಿ ಭಾಗವಹಿಸಲು ಜಿಲ್ಲೆಯಿಂದ ವಿದ್ಯಾರ್ಥಿಗಳಾದ ಶ್ರೇಯಸ್‌ ಮಾರ್ಗನಕೊಪ್ಪ ಹಾಗೂ ಜಾಹ್ನವಿ ದ್ವಿವೇದಿ ಅವರಿಗೆ ಅವಕಾಶ ಸಿಕ್ಕಿತು. ಈ ವಿದ್ಯಾರ್ಥಿಗಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಶೇಷ ಪ್ರಶಸ್ತಿ ಪತ್ರ ಹಾಗೂ ಪರೀಕ್ಷಾ ಪೇ ಚರ್ಚಾ ಕಿಟ್‌ ಅನ್ನು ಬಹುಮಾನವಾಗಿ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.