ಬೆಳಗಾವಿ: ಪರೀಕ್ಷಾ ವೇಳಾಪಟ್ಟಿ ಬದಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಪತ್ರಿಭಟನೆ ನಡೆಸಿದರು.
‘ಜಿಲ್ಲೆಯಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಅನೇಕ ರಸ್ತೆ, ಸೇತುವೆಗಳು ಜಲಾವೃಗೊಂಡಿವೆ. ಆ ಭಾಗದ ಜನರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಈ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿತ ವೇಳೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದರು.
‘ವೇಳಾಪಟ್ಟಿ ಬದಲಿಸುವಂತೆ ಈಗಾಗಲೇ ಕುಲಪತಿ ಹಾಗೂ ಪರೀಕ್ಷಾ ವಿಭಾಗದ ಕುಲಸಚಿವರ ಗಮನಕ್ಕೆ ತರಲಾಗಿತ್ತು. ಆದರೆ, ಅವರು ಸ್ಪಂದಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.