ಬೆಳಗಾವಿ: ‘ಮಕ್ಕಳು ಪಠ್ಯದ ಜೊತೆಗೆ ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ಕೊಡಬೇಕು’ ಎಂದು ಇಲ್ಲಿನ ಡಿಡಿಪಿಐ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎಂ.ಎಫ್. ಚಿಪ್ಪಲಕಟ್ಟಿ ಸಲಹೆ ನೀಡಿದರು.
ಪದೋನ್ನತಿ ಪಡೆದು ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಂಗವಾಗಿ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
‘ದೈಹಿಕ ಬೆಳವಣಿಗೆಗಾಗಿ ವ್ಯಾಯಾಮ, ಯೋಗಾಸನ ಮೊದಲಾದ ಚಟುವಟಿಕೆಗಳಲ್ಲಿ ತೊಡಗಬೇಕು’ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸುಣಗಾರ, ಪದಾಧಿಕಾರಿಗಳಾದ ರಾಜೇಂದ್ರಕುಮಾರ್ ಚಲವಾದಿ, ಎಸ್.ಜಿ. ರಜಪೂತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.