ADVERTISEMENT

ಮಹೇಶ ಪಿಯು ಕಾಲೇಜು: ಅಧ್ಯಯನ ಸಾಮಗ್ರಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 14:06 IST
Last Updated 12 ಅಕ್ಟೋಬರ್ 2020, 14:06 IST
ಬೆಳಗಾವಿಯ ಎಸ್‌ಜಿವಿ ಮಹೇಶ ಪಿಯು ಕಾಲೇಜಿನಲ್ಲಿ ವಿವಿಧ ವಿಷಯಗಳ ಅಧ್ಯಯನ ಸಾಮಗ್ರಿಗಳ ಬಿಡುಗಡೆ ಕಾರ್ಯಕ್ರಮ ಸೋಮವಾರ ನಡೆಯಿತು
ಬೆಳಗಾವಿಯ ಎಸ್‌ಜಿವಿ ಮಹೇಶ ಪಿಯು ಕಾಲೇಜಿನಲ್ಲಿ ವಿವಿಧ ವಿಷಯಗಳ ಅಧ್ಯಯನ ಸಾಮಗ್ರಿಗಳ ಬಿಡುಗಡೆ ಕಾರ್ಯಕ್ರಮ ಸೋಮವಾರ ನಡೆಯಿತು   

ಬೆಳಗಾವಿ: ಇಲ್ಲಿಯ ಎಸ್‌ಜಿವಿ ಮಹೇಶ ಪಿಯು ಕಾಲೇಜಿನಲ್ಲಿ ವಿವಿಧ ವಿಷಯಗಳ ಅಧ್ಯಯನ ಸಾಮಗ್ರಿಗಳ ಬಿಡುಗಡೆ ಕಾರ್ಯಕ್ರಮ ಸೋಮವಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ.ಡಿ.ಜಿ. ಕುಲಕರ್ಣಿ ಬಿಡುಗಡೆ ಮಾಡಿದರು. ನಂತರ ಮಾತನಾಡಿ, ‘ಮಕ್ಕಳಲ್ಲಿ ಜ್ಞಾನಾರ್ಜನೆಗೆ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ. ಓದಿಗೆ ಸ್ಫೂರ್ತಿದಾಯಕ ವಾತಾವರಣವನ್ನು ಮನೆಯಲ್ಲೂ ರೂಪಿಸುವುದು ಬಹಳ ಮುಖ್ಯ. ಈಗಿನ ಸಂದರ್ಭದಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಹೊಂದಿಕೊಳ್ಳಬೇಕಾದ ಅನಿವಾರ್ಯವೂ ಇದೆ’ ಎಂದರು.

ವರ್ಚುವಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ.ವಿ. ಭಟ್ಟ, ‘ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಉತ್ತಮ ವೇದಿಕೆ ಒದಗಿಸಿದ್ದೇವೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಪುಸ್ತಕಗಳ ಕುರಿತು ವಿವಿಧ ವಿಭಾಗಗಳ ಮುಖ್ಯಸ್ಥರಾದ ಸುನೀಲ ವೈಕುಂಠೆ, ಪ್ರಸನ್ನ ಹೆಗಡೆ, ಆನಂದ ಖೋತ್ ಹಾಗೂ ಸ್ಮಿತಾ ಪವಾರ ಮಾಹಿತಿ ನೀಡಿದರು.

ಉಪನ್ಯಾಸಕ ಮುಕುಂದ ಗೋಖಲೆ ಸ್ವಾಗತಿಸಿದರು. ಸ್ಮಿತಾ ಪವಾರ ನಿರೂಪಿಸಿದರು. ಅಭಿಜಿತ ಹಣಗೋಡಿಮಠ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.