ADVERTISEMENT

ಡಿಕೆಶಿಯದು ಮುಟ್ಠಾಳತನದ ಹೇಳಿಕೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 18:21 IST
Last Updated 28 ನವೆಂಬರ್ 2020, 18:21 IST
   

ಬೆಳಗಾವಿ: ‘ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ವಿಡಿಯೊವೊಂದು ಕಾರಣ ಎಂಬ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಹೇಳಿಕೆ ಮುಟ್ಠಾಳತನದ್ದು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನರ ದಿಕ್ಕು ತಪ್ಪಿಸುವ ಹೇಳಿಕೆಯನ್ನು ಅವರು ನೀಡಿದ್ದಾರೆ. ಅಧಿಕಾರ ಕಳೆದುಕೊಂಡಿರುವ ಅವರು ಹತಾಶರಾಗಿದ್ದಾರೆ, ಹೀಗಾಗಿ, ದಿನಕ್ಕೊಂದು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಏನೇ ಆರೋಪ ಮಾಡಿದರೂ ಅದಕ್ಕೆ ದಾಖಲೆಗಳಿರಬೇಕು. ಅದ್ಯಾವುದೋ ವಿಡಿಯೊ ಇರುವುದು ಗೊತ್ತಾಗಿದ್ದರೆ ಮೊದಲೇ ಯಾಕೆ ಹೇಳಲಿಲ್ಲ? ಹೇಳಿದ್ದರೆ ಆತ ಆತ್ಮಹತ್ಯೆಗೆ ಯತ್ನಿಸುವುದನ್ನು ತಡೆಯಬಹುದಿತ್ತು. ಸಾಯಲಿ ಅಂತ ಕಾಯುತ್ತಿದ್ದರಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೆಟ್ಟ ರಾಜಕಾರಣ ಮಾಡಬಾರದು. ವಿಡಿಯೊ ಇದ್ದರೆ ಬಿಡುಗಡೆ ಮಾಡಲಿ ಅಥವಾ ಸಂತೋಷ್‌ಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಿಧಾನಪರಿಷತ್ ಸದಸ್ಯರು, ಸಚಿವರು ಯಾರು ಎನ್ನುವುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.