ADVERTISEMENT

ನ.1ರ ನಂತರವೇ ಕಬ್ಬು ನುರಿಸುವ ಹಂಗಾಮು ಆರಂಭಿಸಿ: ಹಸಿರು ಸೇನೆ ಅಧ್ಯಕ್ಷ ಚೂನಪ್ಪ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 10:22 IST
Last Updated 8 ಅಕ್ಟೋಬರ್ 2025, 10:22 IST
   

ಬೆಳಗಾವಿ: ‘ಸರ್ಕಾರಿ ಆದೇಶದಂತೆ ನವೆಂಬರ್‌ 1ರ ನಂತರವೇ, ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಚೂನಪ್ಪ ಪೂಜೇರಿ ಒತ್ತಾಯಿಸಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಯಾವುದೇ ಸಕ್ಕರೆ ಕಾರ್ಖಾನೆಗಳು ಈವರೆಗೆ ಕಬ್ಬಿಗೆ ದರ ನಿಗದಿಪಡಿಸಿಲ್ಲ. ಹಾಗಾಗಿ ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ, ಅ.10ರಂದು ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ’ ಎಂದರು.

ಮುಖಂಡ ಪ್ರಕಾಶ ನಾಯಕ, ಕಿಶನ್ ನಂದಿ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.