
ಬೈಲಹೊಂಗಲ: ‘ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ’ ಎಂದು ಶ್ರೀ ಸೋಮೇಶ್ವರ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಹೇಳಿದರು.
ಕಾರ್ಖಾನೆಯಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕಬ್ಬು ಅರೆಯುವ ಹಂಗಾಮು ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ರೈತರು ಹೆಚ್ಚಿನ ಪ್ರಮಾಣದಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಕಬ್ಬು ಕಟಾವು ಮಾಡುವ ಗ್ಯಾಂಗುಗಳ ವ್ಯವಸ್ಥೆಗಾಗಿ ₹15 ಕೋಟಿ ನೀಡಲಾಗಿದೆ. ಕಾರ್ಖಾನೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಸಿಸ್ಟಾ ಸಂಸ್ಥೆಯಿಂದ ಅತ್ಯುತ್ತಮ ಸಕ್ಕರೆ ಇಳುವರಿ ಪ್ರಶಸ್ತಿ ದೊರೆತಿದೆ’ ಎಂದರು.
ಉಪಾಧ್ಯಕ್ಷ ರಾಜು ಕುಡಸೋಮಣ್ಣವರ ಮಾತನಾಡಿ, ಕಾರ್ಖಾನೆ ಪ್ರಗತಿಗೆ ಎಲ್ಲರೂ ಸಹಕಾರ ನೀಡಬೇಕೆಂದರು.
ರುದ್ರಾಕ್ಷಿಮಠ ಬಸವಲಿಂಗ ಸ್ವಾಮೀಜಿ, ಮೂರುಸಾವಿರಮಠ ಪ್ರಭುನೀಲಕಂಠ ಸ್ವಾಮೀಜಿ, ಹೊಸೂರ ಗಂಗಾಧರ ಸ್ವಾಮೀಜಿ, ನಯಾನಗರ ಅಭಿನವಸಿದ್ಧಲಿಂಗ ಸ್ವಾಮೀಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತಯ್ಯ ಆರಾದ್ರಿಮಠ, ಜಾಲಿಕೊಪ್ಪ ತಪೋವನದ ಶಿವಾನಂದ ಗುರೂಜಿ ಸಾನ್ನಿಧ್ಯ ವಹಿಸಿದ್ದರು.
ನಿರ್ದೇಶಕರಾದ ಮಹಾಂತೇಶ ಮತ್ತಿಕೊಪ್ಪ, ಉಮೇಶ ಬಾಳಿ, ಕಾರ್ತಿಕ ಮಲ್ಲೂರ, ಅಶೋಕ ಯರಗೊಪ್ಪ, ಮಲ್ಲಪ್ಪ ಅಷ್ಠಗಿ, ಅನಿತಾ ಮೆಟಗುಡ್ಡ, ಕಸ್ತೂರಿ ಸೋಮನಟ್ಟಿ, ಅದೃಶ್ಯಪ್ಪ ಕೋಟಬಾಗಿ, ಅಶೋಕ ಬಾಳೇಕುಂದರಗಿ, ರಾಮಚಂದ್ರ ಕಕ್ಕಯ್ಯನವರ, ಸಣ್ಣಭೀಮಶೆಪ್ಪ ಅಂಬಡಗಟ್ಟಿ, ರಾಜಶೇಖರ ಎತ್ತಿನಮನಿ, ಶ್ರೀಶೈಲ ಶರಣಪ್ಪನವರ, ಕಾರ್ಯದರ್ಶಿ ಅಶೋಕ ಬೊಮ್ಮಣ್ಣವರ ಇದ್ದರು.
ಇದಕ್ಕೂ ಮೊದಲು ಬೆಳಿಗ್ಗೆ ಹಬೆಜನಕ (ಬಾಯ್ಲರ್) ಪ್ರದೀಪನಾ ಪೂಜಾ ಕಾರ್ಯ ನಡೆಯಿತು.
ಮಹಾಂತೇಶ ಶಾಸ್ತ್ರೀಗಳು ಮುರಗೈನವರಮಠ ಪೂಜೆ ನೆರವೇರಿಸಿದರು. ಉಪಾಧ್ಯಕ್ಷ ರಾಜು ಕುಡಸೋಮಣ್ಣವರ ದಂಪತಿ ಪೂಜಾ ಕಾರ್ಯ ನೇತೃತ್ವ ವಹಿಸಿದ್ದರು.
ಪ್ರತಿಭಾ ಪುರಸ್ಕಾರ
ಸಂಸ್ಥಾಪಕ ದಿ.ಆರ್.ಸಿ. ಬಾಳೇಕುಂದರಗಿ ಅವರ ಸವಿನೆನಪಿಗಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಕಾರ್ಖಾನೆ ಕಾರ್ಮಿಕರ ಸಿಬ್ಬಂದಿಯ ಮತ್ತು ರೈತ ಸದಸ್ಯರ 68 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.