ADVERTISEMENT

ರೈತರ ಅಹೋರಾತ್ರಿ ಧರಣಿ ವಾಪಸ್

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 15:54 IST
Last Updated 13 ಡಿಸೆಂಬರ್ 2018, 15:54 IST

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಕೊಡಿಸುವುದು ಹಾಗೂ ಪ್ರಸ್ತುತ ಹಂಗಾಮಿನ ದರ ನಿಗದಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿರುವುದರಿಂದಾಗಿ, ರೈತರು ಸುವರ್ಣ ವಿಧಾನಸೌಧ ಬಳಿಯ ಕೊಂಡಸಕೊಪ್ಪದಲ್ಲಿ ನಡೆಸಲು ಉದ್ದೇಶಿಸಿದ್ದ ಅಹೋರಾತ್ರಿ ಧರಣಿ ವಾಪಸ್ ಪಡೆದರು.

ಗುರುವಾರ ರಾತ್ರಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ‘ಮುಂದಿನ ದಿನಗಳಲ್ಲಿ ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು. ಇದಕ್ಕಾಗಿ ಕಾನೂನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ. ಚಳಿಗಾಲ ಅಧಿವೇಶನ ಮುಗಿಯುವುದರ ಒಳಗಾಗಿ ಸಮಸ್ಯೆ ಪರಿಹರಿಸಲಾಗುವುದು. ಶುಕ್ರವಾರ (ಡಿ. 14) ಸಕ್ಕರೆ ಸಚಿವ ಕೆ.ಜೆ. ಜಾಜ್೯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸುವಂತೆ ಹಾಗೂ ಬಿಲ್ ಬಾಕಿ ಕೊಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹೀಗಾಗಿ, ಅಹೋರಾತ್ರಿ ಧರಣಿಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ’ ಎಂದು ಮುಖಂಡರಾದ ಸಿದಗೌಡ ಮೋದಗಿ ಹಾಗೂ ಚೂನಪ್ಪ ಪೂಜಾರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT