ADVERTISEMENT

ಕಬ್ಬು ದರ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 13:05 IST
Last Updated 6 ನವೆಂಬರ್ 2025, 13:05 IST
<div class="paragraphs"><p>ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹಮ್ಮಿಕೊಂಡ ಧರಣಿ ಸ್ಥಳಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಗುರುವಾರ ಸಂಜೆ ಭೇಟಿ ನೀಡಿದರು</p></div>

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹಮ್ಮಿಕೊಂಡ ಧರಣಿ ಸ್ಥಳಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಗುರುವಾರ ಸಂಜೆ ಭೇಟಿ ನೀಡಿದರು

   

ಬೆಳಗಾವಿ: ‘ಕಬ್ಬು ದರ ನಿಗದಿ ಮಾಡುವ ಅಧಿಕಾರ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕೈಯಲ್ಲಿದೆ. ಆದರೂ ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಯತ್ನಿಸುತ್ತದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರದ ಸಕ್ಕರೆ ಸಚಿವರು ಕರ್ನಾಟಕ ರಾಜ್ಯದವರೇ ಇದ್ದಾರೆ. ದುರದೃಷ್ಟವಶಾತ್‌ ಪ್ರಲ್ಹಾದ್‌ ‌ಜೋಶಿ ಅವರ ಹೆಸರು ಯಾರೂ ಇಲ್ಲಿಯವರೆಗೂ ತೆಗೆದಿಲ್ಲ. ಶಿವಾನಂದ ಪಾಟೀಲ ಸ್ಥಳಕ್ಕೆ ಬಂದಿಲ್ಲ ಎಂದು ಮಾತ್ರ ಆರೋಪಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

‘ನ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದಿದ್ದಾರೆ. ಅಲ್ಲಿನ ನಿರ್ಧಾರ ಪ್ರಕಟಿಸುವವರೆಗೆ ರೈತರು ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಬಾರದು’ ಎಂದರು.

‘ರೈತರ ಹೋರಾಟ ಪ್ರಾಮಾಣಿಕವಾದದ್ದು. ಅದರ ಅರಿವು ನಮಗೂ ಇದೆ. ರೈತರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತೇವೆ. ಧರಣಿ ಸ್ಥಳಕ್ಕೆ ಹೋಗದಂತೆ ನನ್ನ ಮೇಲೆ ಯಾರೂ ಒತ್ತಡ ಹೇರಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೂ ಮುನ್ನ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರ ಜತೆಗೆ ಸಭೆ ನಡೆಸಿ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.