ADVERTISEMENT

ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಆರಂಭ

​ಪ್ರಜಾವಾಣಿ ವಾರ್ತೆ
Published 2 ಮೇ 2019, 14:44 IST
Last Updated 2 ಮೇ 2019, 14:44 IST

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಗುರುವಾರ ಆರಂಭವಾಯಿತು.

ಜಿಲ್ಲಾ ಪಂಚಾಯ್ತಿ ಸಿಇಒ ಕೆ.ವಿ. ರಾಜೇಂದ್ರ ಉದ್ಘಾಟಿಸಿದರು. ‘ಗ್ರಾಮೀಣ ಕ್ರೀಡೆ ಹಾಗೂ ಜನಪದ ಕಲೆಯನ್ನು ಉಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಶಿಬಿರದಲ್ಲಿ ಹಲವು ಚಟುವಟಿಕೆಗಳನ್ನು ನಡೆಸಲಾಗುವುದು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೇವತಿ ಎಸ್. ಹೊಸಮಠ, ನಗರ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಮಲಾ ಎಂ. ಬಸರಗಿ ಇದ್ದರು.

ADVERTISEMENT

ಹಿರಿಯ ಸಹಾಯಕ ನಿರ್ದೇಶಕ ಅರುಣ ಮ. ನೀರಗಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.