ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುನೀಲ್ ಸಂಕ ಆಯ್ಕೆ, ಕಿರಣಗೆ ಕೈತಪ್ಪಿದ ಟಿಕೆಟ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 15:45 IST
Last Updated 9 ಏಪ್ರಿಲ್ 2022, 15:45 IST
ಸುನೀಲ್ ಸಂಕ
ಸುನೀಲ್ ಸಂಕ   

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ.

ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ.

ಕೆಎಲ್‌ಇ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನೂ ನಡೆಸಿದ್ದರು. ಪದವೀಧರರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿಯ ಪೋಸ್ಟರ್‌ಗಳನ್ನು ಕೂಡ ಹಾಕುತ್ತಿದ್ದರು. ಅವರಿಗೇ ಟಿಕೆಟ್ ಅಂತಿಮ ಎಂಬ ಮಾತುಗಳು ಕೂಡ ಪಕ್ಷದ ವಲಯದಲ್ಲಿ ಕೇಳಿಬಂದಿದ್ದವು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದೆ. ಸುನೀಲ್ ಸಂಕ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.

ADVERTISEMENT

ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ ಮತ್ತೆ ಟಿಕೆಟ್‌ ಘೋಷಿಸಲಾಗಿದೆ. ಅವರು ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.