ADVERTISEMENT

ಬೆಳಗಾವಿ | ಶುದ್ಧ ಕುಡಿಯುವ ನೀರನ್ನೇ ಪೂರೈಸಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 7:03 IST
Last Updated 29 ಆಗಸ್ಟ್ 2024, 7:03 IST
ಮೊಹಮ್ಮದ್ ರೋಷನ್
ಮೊಹಮ್ಮದ್ ರೋಷನ್   

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ  ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು.

ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. 

‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24x7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ ಯೋಜನೆ ವಿಸ್ತರಿಸುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಜಲ ಸಂಗ್ರಹಾಗಾರಗಳಲ್ಲಿ ಶುಚಿತ್ವ ಕಾಪಾಡಬೇಕು’ ಎಂದು ತಾಕೀತು ಮಾಡಿದರು.

ADVERTISEMENT

ಕೆಯುಐಡಿಎಫ್‍ಸಿ ಅಧೀಕ್ಷಕ ಎಂಜಿನಿಯರ್‌ ಲಕ್ಷ್ಮಿ ಸುಳಗೇಕರ, ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಅಶೋಕ ಬುರಕುಲೆ, ವಿ.ಎಂ.ಸಾಲಿಮಠ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಶಶಿಕುಮಾರ ಹತ್ತಿ, ವಿಜಯಾನಂದ ಸೊಲ್ಲಾಪುರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.